Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ರೈತರ ಸಮಸ್ಯೆಗಳಿಗೆ ಅಧಿಕಾರಿಗಳ ಅಸಡ್ಡೆ ಸಲ್ಲದು :ಮಧು ಜಿ ಮಾದೇಗೌಡ

ಮದ್ದೂರು:  ರೈತರು ತಮ್ಮ ಸಮಸ್ಯೆ ಹೇಳಿಕೊಂಡು ಕಚೇರಿಗಳಿಗೆ ಬಂದಾಗ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಅಸಡ್ಡೆ ತೋರದೆ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡಿ ಎಂದು ವಿಧಾನ ಪರಿಷತ್ ಶಾಸಕ ಮಧು ಜಿ ಮಾದೇಗೌಡ ಅವರು ಹೇಳಿದರು.

ಸೋಮವಾರ ಮದ್ದೂರಿನ ಬಾಲಜಿ ಸಮುದಾಯ ಭವನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೈತರು ತಮ್ಮ ಕೃಷಿ ಚಟುವಟಿಕೆಗಳೊಂದಿಗೆ ತಮಗೆ ಇರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಈ ಹಿನ್ನೆಲೆ ರೈತರು ಸರ್ಕಾರಿ ಕಚೇರಿ ಅಲೆಯುತ್ತಾರೆ. ಅವರನ್ನು ಕಾಯಿಸದೆ ಹಾಗೂ ಅಲ್ಲಿಂದಿಲ್ಲಿಗೆ ಅಲೆಸದೆ ಅವರ ಕೆಲಸ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅಧಿಕಾರಿಗಳಿಂದ ಮಾತ್ರ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈ ಜೋಡಿಸಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಾಗ ಮಾತ್ರ ಬಗೆಹರಿಸಲು ಸಾಧ್ಯ ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಜನರು ತಮ್ಮ ಕೆಲಸಕ್ಕಾಗಿ ಅಧಿಕಾರಿಗಳ ಹಾಗೂ ಶಾಸಕರ ಹಿಂದೆ ಸುತ್ತಾಡುವುದು ಅವರಿಗಾಗಿ ಕಾಯುವುದನ್ನು ನಾವು ನೋಡಿದ್ದೇವೆ ಇನ್ನು ಮುಂದೆ ಇದೆಲ್ಲ ನಡೆಯಬಾರದು ಅಧಿಕಾರಿಗಳೇ ಸಾರ್ವಜನಿಕರ ಹಿಂದೆ ಸುತ್ತಿ ಅವರ ಸಮಸ್ಯೆ ಬಗೆಹರಿಸಬೇಕು ಎಂದರು.

ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಜನ ಸ್ಪಂದನ ಕಾರ್ಯಕ್ರಮವನ್ನು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಯೋಜಿಸುತ್ತಿದ್ದೇವೆ. ಮೊದಲ ಹಂತದಲ್ಲಿ ತಾಲೂಕು ಕೇಂದ್ರಗಳಲ್ಲಿ ಎರಡನೇ ಹಂತದಲ್ಲಿ ಹೋಬಳಿ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಅಧಿಕಾರಿಗಳು ಹಾಜರಿದ್ದು ಸಾರ್ವಜನಿಕರ ದೂರುಗಳನ್ನು ಆಲಿಸಬೇಕು ಸಮಸ್ಯೆಗಳನ್ನು ಪರಿಹರಿಸಬೇಕು, ಪರಿಹಾರವಿಲ್ಲದ ಸಮಸ್ಯೆಗಳು ಇರುವುದಿಲ್ಲ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೆ ಇದೆ, ಹಾಗಾಗಿ ಕಾನೂನು ರೀತಿಯಲ್ಲಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಎಂದು ಹೇಳಿದರು.

Tags: