ಚಾಮರಾಜನಗರ : ಮನೆ ಬೀಗ ಮುರಿದು ಬರೋಬ್ಬರಿ ೧೪ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಖದೀಮರು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ.
ಬಡಾವಣೆಯ ರಾಘವೇಂದ್ರ ಎಂಬುವವರ ಮನೆ ಇದಾಗಿದ್ದು, ಎಲ್ಲರೂ ಮಂತ್ರಾಲಯದ ರಾಯರ ದರ್ಶನಕ್ಕೆ ಎಂದು ಹೋಗಿದ್ದರು. ಮಂತ್ರಾಲಯದಿಂದ ಕುಟುಂಬಸ್ಥರು ಬರುವಷ್ಟರಲ್ಲಿ ಮನೆಯಲ್ಲಿದ್ದ ಚಿನ್ನದ ಜೊತೆಗೆ ೨೦ ಸಾವಿರ ರೂಪಾಯಿ ನಗದು ದೋಚಿದ್ದಾರೆ. ಇನ್ನು ಈ ಸಂಬಂಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.





