ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್‌ದುರಂತ ನಡೆದು ಮೂರು ವರ್ಷಗಳಾಯ್ತು. ಇನ್ನೂ ಕೂಡ ಸಂತ್ರಸ್ತರ ಗೋಳು ಮಾತ್ರ ಕಡಿಮೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಕ್ಕಿಲ್ಲ.
ಇನ್ನೂ ಸರ್ಕಾರ ಹಾಗೂ ಜಿಲ್ಲಾಡಳಿತ ಗುತ್ತಿಗೆ ಆಧಾರದ ಮೇಲೆ ಕೆಲಸವೇನೊ ಕೊಟ್ಟಿದೆ. ಆದ್ರೆ ಹೊರಗುತ್ತಿಗೆ ಆದೇಶ, ಹಾಜರಾತಿ, ವೇತನ ಮಂಜೂರು ಮಾಡಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮವೂ ಆಗಿಲ್ಲವೆಂದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಕೋವಿಡ್‌ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ದುರಂತ ಇಡೀ ದೇಶದ ಗಮನ ಸೆಳೆದಿತ್ತು. ಒಂದೇ ರಾತ್ರಿ ಆಕ್ಸಿಜನ್‌ಕೊರತೆಯಿಂದ 36 ಮಂದಿ ಸಾವನ್ನಪ್ಪಿದ್ದರು. ಆ ವೇಳೆ ಕಾಂಗ್ರೆಸ್‌ಪಕ್ಷದ ನಾಯಕರು ಬಿಜೆಪಿ ಸರ್ಕಾರ ದ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಭಾರತ್‌ಜೋಡೋ ಯಾತ್ರೆಯ ವೇಳೆ ಸರ್ಕಾರಿ ನೌಕರಿಯ ಭರವಸೆ ಕೊಟ್ಟಿದ್ದರು.
ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ಸರ್ಕಾರ ಅಸ್ತಿತ್ವದಲ್ಲಿದೆ. ಆದ್ರೂ ಕೂಡ ಸಂತ್ರಸ್ತರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ಕೊಡುವ ಭರವಸೆ ಮಾತ್ರ ಮರೀಚಿಕೆಯಾಗಿಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಕ್ಕಾಗಿ ಸಂತ್ರಸ್ತ ಕುಟುಂಬಸ್ಥರು ಹೋರಾಟ ಮಾಡುತ್ತಿದ್ದಾರೆ.
ಅಲ್ಲದೇ ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌ಅವರು, ಆಕ್ಸಿಜನ್‌ದುರಂತದ ಬಗ್ಗೆ ಮರು ತನಿಖೆ ನಡೆಸುವುದಾಗಿ ಹೇಳಿದ್ದರು. ಆದ್ರೆ ಇಲ್ಲಿಯವರೆಗೂ ಕೂಡ ಮರು ತನಿಖೆ ಮಾತ್ರ ಆರಂಭವಾಗಿಲ್ಲ. ಆಕ್ಸಿಜನ್‌ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಆಗಿಲ್ಲ. ಸರ್ಕಾರ ತಪ್ಪಿತಸ್ಥರನ್ನು ಬಚಾವ್‌ಮಾಡಲು ಮುಂದಾಗಿದ್ಯಾ ಎಂದು ಸಂತ್ರಸ್ತರ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.





