ಮೈಸೂರು: ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ 18ನೇ ವಾರ್ಷಿಕೋತ್ಸವದ ಅಂಗವಾಗಿ ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಡಿ.ಗೋಪಿನಾಥ್‌ರಿಗೆ ಚಾಣಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗೋಪಿನಾಥ್ ಅವರಿಗೆ ಸಹಕಾರಿ ಕ್ಷೇತ್ರದಿಂದ ಗುರುತಿಸಿ ಚಾಣಕ್ಯ ಸೇವಾ ರತ್ನ ಪ್ರಶಸ್ತಿಯನ್ನು ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಹಾಗೂ ಇನ್ನಿತರ ಪದಾಧಿಕಾರಿಗಳು ಕೃಷ್ಣಮೂರ್ತಿಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆವರಣದಲ್ಲಿ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷೆ ಎಂ.ಎನ್.ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜು, ನಿರ್ದೇಶಕ ಮಂಡಳಿ ಸದಸ್ಯರಾದ ಸಿ.ವಿ.ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್.ಎಸ್.ಬಾಲಕೃಷ್ಣ, ಎಂ.ಆರ್.ಚೇತನ್ ಸೇರಿದಂತೆ ಹಲವರು ಹಾಜರಿದ್ದರು.