Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಮುಡಾ ಹಗರಣ : ಈ ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದಿದ್ರು ಮೈಸೂರು ಡಿಸಿ

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಿಂದ ೫೦:೫೦ ಅನುಪಾತದಲ್ಲಿ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಈ ಹಿಂದೆಯೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ಮುಡಾ ಆಯುಕ್ತರಿಗೆ ಒಂದಲ್ಲ ಎರಡಲ್ಲ ೧೫ ಪತ್ರಗಳನ್ನ ಬರೆದಿದ್ದರು. ಪತ್ರದಲ್ಲಿ ತುರ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಫೆ.೮ ರಿಂದ ಮುಡಾ ಆಯುಕ್ತರಿಗೆ ಸ್ಪಷ್ಟನೆ ಕೇಳಿ ನಿರಂತರವಾಗಿ ಪತ್ರ ಬರೆದಿದ್ರು. ಅಲ್ಲದೆ ಸಾಕಷ್ಟು ಅಂಶಗಳನ್ನ ತಿಳಿಸಿ ನಗರಾಭಿವೃದ್ಧಿ ಕಾರ್ಯದರ್ಶಿಗೆ ಪತ್ರ ಮೂಲಕ ತಿಳಿಸಿದ್ದರು. ಆದರೆ ಮೈಸೂರು ಡಿಸಿ ಪತ್ರಗಳಿಗೆ ಆಯುಕ್ತರು ಯಾವುದೇ ಉತ್ತರ ನೀಡಿರಲಿಲ್ಲ. ಈಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ  ಸರ್ಕಾರಕ್ಕೂ ಸಹ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಪತ್ರ ಬರೆದಿದ್ದರು.

Tags:
error: Content is protected !!