Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಜುಲೈ 10ಕ್ಕೆ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ

ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಅಗತ್ಯ ದಾಖಲಾತಿಗಳೊಡನೆ ಸ್ವೀಕರಿಸುವ ದೂರು ಸ್ವೀಕರಿಸಲಿದ್ದಾರೆ.

ಜುಲೈ 10 ರಂದು ಬೆಳಿಗ್ಗೆ 11 ಗಂಟೆಯಿoದ ಮದ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕಾಧಿಕಾರಿಗಳ ಕಚೇರಿ, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಸರ್ಕಾರಿ ಪ್ರವಾಸಿ ಮಂದಿರ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಾಲೂಕು ಕಚೇರಿ ಮತ್ತು ಜುಲೈ 12 ರಂದು ಮಡಿಕೇರಿ ತಾಲ್ಲೂಕಿನ ತಾಲ್ಲೂಕು ಕಚೇರಿಯಲ್ಲಿ ದೂರು ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು, ಕರ್ತವ್ಯ ಲೋಪವೆಸಗುವ ಭ್ರಷ್ಟ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ದೂರು ನೀಡಿ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಮೈಸೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕ್ಷರಾದ ಸಜಿತ್ ವಿ.ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: