Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಬಟ್ಟೆ ಮಾತ್ರ ಪರಿಶುದ್ಧವಾಗಿದ್ದರೆ ಸಾಲದು, ಆಡಳಿತವೂ ಶುದ್ಧವಾಗಿರಬೇಕು: ಸಿಎಂ ಸಿದ್ದು ವಿರುದ್ಧ ಸಿ.ಟಿ.ರವಿ ಕೆಂಡಾಮಂಡಲ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಆರೋಪ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್‌ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬಟ್ಟೆ ಮಾತ್ರ ಪರಿಶುದ್ಧವಾಗಿದ್ದರೆ ಸಾಕಾ ಎಂದು ಪ್ರಶ್ನಿಸಿದ್ದಾರೆ. ಭೂಮಿ ವಶಪಡಿಸಿಕೊಳ್ಳಬೇಕಾದರೆ 50:50 ನಿವೇಶನ ಕೊಡಬೇಕಾಗುತ್ತದೆ. ಸರ್ಕಾರಕ್ಕೆ ಮೋಸ ಮಾಡಬೇಕೆಂದೇ ವ್ಯವಸ್ಥಿತವಾಗಿ ಮಾಡಿದ್ದಾರೆ ಎಂದು ಟೀಕಿಸಿದರು.

ಮೋಸ ಮಾಡಿರುವವರು ಸಿಎಂ ಸಿದ್ದರಾಮಯ್ಯಗೆ ಹತ್ತಿರವಾಗಿರುವವರು. ಅದಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಸಿಎಂ ತವರು ಜಿಲ್ಲೆಯಲ್ಲಿಯೇ ಸಾವಿರಾರು ಕೋಟಿ ಅಕ್ರಮ ಆಗಿದೆ. ಸಿಎಂ ಸಿದ್ದರಾಮಯ್ಯನವರು ತಮ್ಮ ಪರಿಶುದ್ಧತೆಯನ್ನು ಸಾಬೀತುಪಡಿಸಲು ರಾಜೀನಾಮೆ ಕೊಡಬೇಕು ಎಂದ ಸಿ.ಟಿ.ರವಿ ಅವರು, ದಾಖಲೆ ಇಟ್ಟು ಭ್ರಷ್ಟಾಚಾರವನ್ನು ಜನರ ಮುಂದೆಯೇ ಬಯಲಿಗೆಳೆಯುತ್ತೇವೆ. ಭ್ರಷ್ಟಾಚಾರ ಯಾರ ಅವಧಿಯಲ್ಲಿ ಆಗಿದ್ದರೂ ಕ್ರಮ ಕೈಗೊಳ್ಳಿ. ಬಿಜೆಪಿ ಕಾಲದಲ್ಲಿ ಆಗಿದ್ದರೂ ಕ್ರಮ ತೆಗೆದುಕೊಳ್ಳಿ ಎಂದು ಆಗ್ರಹಿಸಿದರು.

 

Tags: