Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

PDO: ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆಗೆ ಸಚಿವ ಸಂಪುಟದ ಒಪ್ಪಿಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಗ್ರಾಮ ಪಂಚಾಯತಿ ಅಧಿಕಾರಿಗಳು ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷದಿಂದ ವರ್ಗಾವಣೆಗಳಿಗೆ ಅನ್ವಯಿಸುವಂತೆ ಕೌನ್ಸಿಲಿಂಗ್‌ ಪದ್ಧತಿಯನ್ನು ಜಾರಿಗೊಳಿಸಲಾಗುವುದು ಎಂದು 2024-25 ಆಯವ್ಯಯದಲ್ಲಿ ಘೋಷಿಸಲಾಗಿತ್ತು ಅದರಂತೆ ಈ ನಿರ್ಧಾರವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಈ ವರ್ಷದಿಂದ ಕೌನ್ಸಿಲಿಂಗ್‌ ಮೂಲಕ ಮಾಡಲಾಗುವುದು. ಈ ಸಂಬಂಧ ನಿಯಮಗಳನ್ನು ರೂಪಿಸಿದ ನಂತರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

 

Tags: