Mysore
15
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟಿರುವವರಿಂದಲೇ ಹಗರಣ ಬಯಲು : ಎಚ್.ಡಿ.ಕೆ ಸ್ಪೋಟಕ ಹೇಳಿಕೆ

ಮೈಸೂರು :  ಮುಖ್ಯಮಂತ್ರಿ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಬೆಳಕಿಗೆ ಬಂದಿದೆ ಎಂದು ಕೇಂದ್ರ ಸಚಿವ ಎಸ್‌.ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮುಡಾ ಹಗರಣ ಬಯಲಿಗೆ ಬಂದ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಿ ಪ್ಯಾಕ್ಟರಿ ಬಂದ್‌ ಆಯ್ತು, ಈಗ ಮುಡಾ ಫ್ಯಾಕ್ಟರಿ ಶುರು ಆಗಿದೆ. ಅವರ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್‌ ವಿರುದ್ಧ ಟೀಕಿಸಿದ್ದಾರೆ.

ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತು ಹೇಗೆ..? ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ ನವರೇ ಒಳಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. ೬೩ ಕೋಟಿ. ರೂ ಪರಿಹಾರ ಕೇಳುವ ಸಿಎಂ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದರು.

Tags:
error: Content is protected !!