Mysore
29
few clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಮಂಡ್ಯ ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು

ಮಂಡ್ಯ : ಕೇಂದ್ರ ಸಚಿವರಾದ ಬಳಿಕ ಎಚ್‌ ಡಿ ಕುಮಾರಸ್ವಾಮಿ ಅವರು ಮೊದಲ ಬಾರಿ ಮಂಡ್ಯ ಜಿಲ್ಲೆಯಲ್ಲಿ ಜನತಾ ದರ್ಶನ ನಡೆಸಿದರು. ಆದರೆ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಮುಜುಗರಕ್ಕೆ ಒಳಗಾದ ಎಚ್‌ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ಧ ಕಿಡಿಕಾರಿದ ಎಚ್ಡಿಕೆ, ಜಿಲ್ಲಾಧಿಕಾರಿಗಳಿಗೆ ಕಾರ್ಯಕ್ರಮಕ್ಕೆ ಹಾಜರಾಗಲು ನಾನು ಮನವಿ ಮಾಡಿದ್ದೆ. ಜನತಾ ದರ್ಶನ ಕಾರ್ಯಕ್ರಮಕ್ಕೆ ಹಾಜರಾಗದಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸುತ್ತೋಲೆ ಹೊರಡಿಸಿದೆ. ಕ್ಯಾಬಿನೆಟ್‌ ನಲ್ಲಿ ಸಿಎಂ, ಸಚಿವರಿಗಷ್ಟೇ ಮಾತ್ರ ಜನತಾ ದರ್ಶನ ಮಾಡುವ ಅಧಿಕಾರವಿದೆ ಎಂದು ಸುತ್ತೋಲೆ ಹೊರಡಿಸಿದೆ. ಅಧಿಕಾರಿಗಳಿಗೂ ಕೂಡ ಈಗಾಗಲೇ ಈ ಕುರಿತು ಸೂಚನೆ ನೀಡಲಾಗಿದೆ. ಇದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಸಿಟ್ಟು ಹೊರಹಾಕಿದರು.

ಅಲ್ಲದೆ ಡಿ.ಕೆ ಸುರೇಶ್‌ ಸಂಸದರಾಗಿದ್ದ ಸಂದರ್ಭದಲ್ಲಿ ರಾಮನಗರದಲ್ಲಿ ಡಿಸಿ ಕಚೇರಿಯಲ್ಲಿ ಸಭೆ ಮಾಡಿದ್ರು. ಜನಸ್ಪಂದನಾ ಹೆಸರಿನಲ್ಲಿ ಹಳ್ಳಿ ಹಳ್ಳಿ ಸುತ್ತಿಸಿದ್ದರು. ಉಸ್ತುವಾರಿ ಸಚಿವರು ಮಾಡಬೇಕಾದ ಕೆಲಸವನ್ನು ಡಿಕೆ ಸುರೇಶ್‌ ಮಾಡಿದ್ದರು. ಅದಕ್ಕೆ ಅನುಮತಿ ಕೊಟ್ಟವರು ಯಾರು..? ಯಾವ ನಿಯಮವಿತ್ತು..? ಇವತ್ತು ಒಬ್ಬ ಕೇಂದ್ರ ಮಂತ್ರಿ ಜನರ  ಬಳಿ ಅಹವಾಲು ಸ್ವೀಕರಿಸಲು ಬಂದಿದ್ದಾರೆ. ಆದರೆ ಹೊಸ ನಿಯಮಾವಳಿಯ ಮೂಲಕ ಇದನ್ನ ತಡೆಯಲು ಮುಂದಾಗಿದ್ದಾರೆ. ಇದು ನನ್ನ ಮನೆಯ ಕೆಲಸವಲ್ಲ.  ಇದರಿಂದ ಅವರಿಗೆ ಏನು ದೊರಕುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!