Mysore
27
broken clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗಷ್ಟೆ ಜನತಾ ದರ್ಶನ ನಡೆಸಲು ಅವಕಾಶವಿರುತ್ತದೆ : ಸಿಎಂ ಸ್ಪಷ್ಟನೆ

ಬೆಂಗಳೂರು : ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ನಡೆಸಿದ ಜನತಾ ದರ್ಶನಕ್ಕೆ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ವಿರುದ್ಧ ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಖಡಕ್‌ ಸಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇವಲ ಸಿಎಂ, ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಜನತಾ ದರ್ಶನ ಕಾರ್ಯಕ್ರಮಕ್ಕೆ ಅವಕಾಶವಿರುತ್ತದೆ. ಹಿಂದಿನ ಬಿಜೆಪಿ ಸರ್ಕಾರ, ವಿರೋಧ ಪಕ್ಷದ ನಾಯಕ ಪರಿಶೀಲನಾ ಸಭೆ ನಡೆಸಕೂಡದು ಅಂತ ಆದೇಶ ಹೊರಡಿಸಿತ್ತು. ಅದು ಯಾರಿಗೂ ಜ್ಞಾಪಕ ಇಲ್ವಾ..? ಇದರಲ್ಲಿ ಹೊಸದೇನು ಇಲ್ಲ. ಮೊದಲಿನಿಂದ ಇದೇ ಪದ್ದತಿ ನಡೆದುಕೊಂಡು ಬಂದಿದೆ. ಇದು ಕುಮಾರಸ್ವಾಮಿ ಅವರ ಜನತಾ ದರ್ಶನಕ್ಕೆ ಸೀಮಿತವಾದ ವಿಷಯವಲ್ಲ. ಮಿಕ್ಕೆಲ್ಲರಿಗೂ ಅನ್ವಯಿಸುತ್ತದೆ ಎಂದು ಹೇಳಿದರು.

Tags:
error: Content is protected !!