Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗುತ್ತಿರುವ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : IAS , IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆಗೆ ದೆಹಲಿಯಲ್ಲಿ ಸಿದ್ಧತೆ ನಡೆಸುತ್ತಿರುವ ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಉತ್ತಮ ಹಾಸ್ಟೆಲ್‌ ಕಟ್ಟಿಸುವ ಜೊತೆಗೆ ತಿಂಗಳಿಗೆ ೧೫ ಸಾವಿರ ರೂಪಾಯಿ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಸದ್ಯ ವಿದ್ಯಾರ್ಥಿಗಳಿಗೆ ೧೦ ಸಾವಿರ ರೂಪಾಯಿ ಕೊಡಲಾಗುತ್ತಿದ್ದು, ಇದೀಗ ೫ ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು ಎಂದು ಇಂದು ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಹಂಚಿಕೆ ರಾಜ್ಯ ಪರಿಷತ್‌ ಸಭೆಯಲ್ಲಿ ಘೋಷಿಸಲಾಯಿತು.

ಅಲ್ಲದೆ ಈ ಹಾಸ್ಟೆಲ್‌ ನಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿ ಖರೀದಿ, ಇತರೆ ಖರ್ಚು ವೆಚ್ಚಗಳನ್ನು ಭರಿಸಲು ತಿಂಗಳಿಗೆ 16 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಿದೆ. ದೆಹಲಿಯಲ್ಲಿ ನಿರ್ಮಾಣವಾಗುವ ಹಾಸ್ಟೆಲ್‌ನಲ್ಲಿ ಹೈಟೆಕ್‌ ಲೈಬ್ರರಿ ಸ್ಥಾಪಿಸಲಾಗುತ್ತಿದ್ದು, ಅಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಕೆಗೆ ಅಗತ್ಯವಿರುವ ಎಲ್ಲಾ ಪುಸ್ತಕಗಳನ್ನ ಓದಗಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

Tags: