ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಲಯನ್ ಸಫಾರಿ ಬಳಿ ನಡೆದಿದೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಮೂರು ಮಂದಿ ಸ್ಥಳದಲ್ಲೆ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.