Mysore
21
clear sky

Social Media

ಮಂಗಳವಾರ, 13 ಜನವರಿ 2026
Light
Dark

ರಾಜ್ಯದ ಖ್ಯಾತಿಯನ್ನು ಹೆಚ್ಚಿಸಲು ಪೊಲೀಸರು ಶ್ರಮ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಕಿವಿಮಾತು ಹೇಳಿದರು.

ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ, ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾಆದಾಯ ಹೆಚ್ಚಾಗುತ್ತದೆ ಎಂದರು.

ಸಾರ್ವಜನಿಕ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೊಲೀಸರು ಗಮನ ಹರಿಸಬೇಕು. ಪೊಲೀಸ್‌ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆಯ ಕೆಲಸ ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು.

ಪೊಲೀಸರ ಮಧ್ಯೆ ಸಮನ್ವಯದ ಕೊರತೆಯಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಒಂದು ಮಾಹಿತಿ ಬಂದರೆ ಅದರ ಬಗ್ಗೆ ಫಾಲೋ ಆಫ್‌ ಕ್ರಮ ವಹಿಸಬೇಕು ಎಂದು ಕಿವಿಮಾತು ಹೇಳಿದರು.

Tags:
error: Content is protected !!