Mysore
24
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಯಾವುದೇ ವಿಶೇಷ ಪಾಸ್ ಇರುವುದಿಲ್ಲ; ಸಚಿವ ಎಚ್.ಸಿ.ಎಂ

ಮೈಸೂರು : ಮುಂದಿನ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪೂಜೆ ಹಿನ್ನೆಲೆ ಯಾವುದೇ ರೀತಿಯ ವಿಶೇಷವಾದ ಪಾಸ್‌ ಇರುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಕೂಡ ನಗರದ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೆಶ್ವರಿಗೆ ವಿಶೇಷವಾದ ಪೂಜೆಯನ್ನ ಸಲ್ಲಿಸಲಾಗುತ್ತದೆ. ಲಕ್ಷಾಂತರ ಭಕ್ತರು ಸಹ ಬೆಟ್ಟಕ್ಕೆ ಭೇಟಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ.

ಹೀಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವರು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ್ದು, ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್‌ ಇರುವುದಿಲ್ಲ. ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಎಲ್ಲಾ ಖಾಸಗಿ ವಾಹನಗಳಿಗೆ ನಿರ್ಬಂಧಿಸಲಾಗಿದ್ದು,  ಉಚಿತ ಬಸ್‌ ಮೂಲಕವೇ ಪ್ರತಿಯೊಬ್ಬರು ಚಾಮುಂಡಿಬೆಟ್ಟಕ್ಕೆ ತೆರಳಬೇಕು ಎಂದು ಹೇಳಿದರು.

 

Tags:
error: Content is protected !!