ಉತ್ತರ ಪ್ರದೇಶ: ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್ಸ್ಟ್ರಾಂಗ್ (52 ವರ್ಷ) ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಆಗ್ರಹಿಸಿದ್ದಾರೆ.
ಪರೆಂಬೂರಿನ ಖಾಸಗಿ ಶಾಲೆಯೊಂದರಲ್ಲಿ ಆರ್ಮ್ಸ್ಟ್ರಾಂಗ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕಾನೂನ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಬಿಎಸ್ಪಿ ರಾಜ್ಯಾಧ್ಯಕ್ಷರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ಹತ್ಯೆ ಸಂಬಂಧ ಬಂಧಿಸಲಾಗಿರುವ ಎಲ್ಲಾ ಎಂಟು ಮಂದಿ ನಿರಪರಾಧಿಗಳು, ಈ ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮಾಯಾವತಿ ಆಕ್ರೋಶ ವ್ಯಕ್ತಪಡಿಸಿದರು.
ಆರ್ಮ್ಸ್ಟ್ರಾಂಗ್ ಅವರನ್ನು ಅವರ ಪೆರಂಬೂರು ನಿವಾಸದ ಸಮೀಪ ಆರು ಮಂದಿ ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿತ್ತು. ಈ ಸಂಬಂಧ ಚೆನ್ನೈ ಪೊಲೀಸ್ ಹತ್ತು ವಿಶೇಷ ತಂಡ ರಚನೆ ಮಾಡಿರುವುದಾಗಿ ಹೆಚ್ಚುವರಿ ಪೊಲೀಸ್ ಆಯುಕ್ತರು ತಿಳಿಸಿದ್ದರು.





