ಮೈಸೂರು: ರಾಜ್ಯದಲ್ಲಿ ದಿನ ಕಳೆದಂತೆ ಡೆಂಘೀ ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಪ್ರತಿ ದಿನ ನೂರಾರು ಮಂದಿ ಡೆಂಘೀ ಜ್ವರಕ್ಕೆ ತುತ್ತಾಗುತ್ತಿದ್ದಾರೆ. ಸಾವಿನ ಸಂಖ್ಯೆಯು ಕೂಡ ಮಂದಗತಿಯಲ್ಲಿ ಏರಿಕೆಯಾಗುತ್ತಿದೆ.
ಈ ಮಹಾಮಾರಿ ಡೆಂಘೀ ಮೂರು ದಿನಗಳ ಹಿಂದೆ ಮೈಸೂರಿನಲ್ಲಿ ಮೊದಲ ಬಲಿ ಪಡೆದಿತ್ತು. ಇದೀಗ ಎರಡನೇ ಬಲಿ ಪಡೆದಿದೆ.
ನಗರದ ಜಯದೇವ ಹೃದ್ರೋಗ ಆಸ್ಪತ್ರೆ ಡೇಟಾ ಎಂಟ್ರಿ ಆಪರೇಟರ್ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಲಲಿತ ಎಂಬುವವರು ಡೆಂಘೀಗೆ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಹುಣಸೂರಿನ ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟಿದ್ದರು. ಈಗ ಜಯದೇವ ಹೃದ್ರೋಗ ಆಸ್ಪತ್ರೆ ಸಿಬ್ಬಂದಿಯು ಡೆಂಘೀ ಮಹಾಮಾರಿಗೆ ಬಲಿಯಾಗಿದ್ದಾರೆ.
ಡೆಂಘೀ ಲಕ್ಷಣಗಳು
ಜ್ವರ, ತಲೆನೋವು, ಮೈ ಕೈ ನೋವು, ಕೀಲುನೋವು, ಹೊಟ್ಟೆನೋವು, ವಾಕರಿಕೆ, ವಾಂತಿ ಹಾಗೂ ಭೇದಿ ಕಾಣಿಸಿಕೊಂಡಲ್ಲಿ ಭಯಪಡೆದೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ. ಕೊಳಚೆ ನೀರಿನಲ್ಲಿ ಡೆಂಘೀ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಸೊಳ್ಳೆ ನಿಯಂತ್ರಿಣಕ್ಕೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತೀ ಮುಖ್ಯವಾಗಿದೆ.