Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಮುಡಾ ಸೈಟು ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಬಸವರಾಜ ಬೊಮ್ಮಾಯಿ

ಗದಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟು ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾದೀಶರ ನೇತೃತ್ವದಲ್ಲಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳುತ್ತಾರೆ. ಹಾಗಾದರೇ ಅವರು ಈ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸಬೇಕು ಎಂದರು.

ಸಿಬಿಐ ಅಥವಾ ನ್ಯಾಯಾಧೀಶರ ತನಿಖೆಯಿಂದ ಯಾವುದೇ ಅಕ್ರಮ ನಡೆದಿದ್ದರೂ ಹೊರ ಬರುತ್ತದೆ ಎಂದೂ ಅವರು ಹೇಳಿದರು.

ಇನ್ನು ಡೆಂಗಿ ಎದುರಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಬಡವರ ಜೀವದ ಜತೆಯಲ್ಲಿ ಚೆಲ್ಲಾಟ ಆಡುತ್ತಿದೆ. ಡೆಂಗಿ ಪ್ರಕರಣಗಳು ರಾಜ್ಯಾದ್ಯಂತ ಹರಡುತ್ತಿದ್ದು, ಈವರೆಗೆ ಸರ್ಕಾರ ಯಾವುದೇ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿಲ್ಲ. ಹೊಸ ಮಳೆ ಬಂದಾಗ ನಿಂತ ನೀರಿನಿಂದ ಬರುವ ರೋಗ ಇದಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಲಸ ಸರ್ಕಾರ ಮಾಡಬೇಕಿದೆ ಎಂದರು.

ಈ ರೋಗದಿಂದ ಹಲವಾರು ಸಾವು-ನೋವುಗಳಾಗಿದ್ದು, ರಾಜ್ಯದಲ್ಲಿ ಚಿಂತಾಜನಕ ಸ್ಥಿತಿ ಎದುರಾಗಿದೆ. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಡೆಂಗಿ ಟೆಸ್ಟ್‌, ಸಮರ್ಪಕ ಔಷಧ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಪ್ರಾಥಾಮಿಕ ಹಂತದಲ್ಲಿಯೇ ಡೆಂಗಿಯನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಸಲಹೆ ನೀಡಿದರು.

Tags: