Mysore
18
clear sky

Social Media

ಶನಿವಾರ, 03 ಜನವರಿ 2026
Light
Dark

ಕರಾವಳಿಯಲ್ಲಿ ಜಡಿ ಮಳೆ: ಜನ ಜೀವನ ಅಸ್ತವ್ಯಸ್ತ

ಮಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಕಳೆದೊಂದು ವಾರದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಮಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡು ಪ್ರದೇಶವಾದ ಕೊಡಗಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂ ಕುಸಿತ ಉಂಟಾಗಿದೆ.

ಉಡುಪಿಯು ವರುಣನ ಅಬ್ಬರಕ್ಕೆ ನಲುಗಿದ್ದು, ನಗರದ ಹಲವೆಡೆ ನೆರೆ ಸೃಷ್ಟಿಸಿಯಾಗಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ. ಸುಮಾರು ಮೂರು ಗಂಟೆ ಸುರಿದ ರಣ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮಣಿಪಾಲ ಪರ್ಕಳ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಭಾರೀ ಪ್ರಮಾಣದಲ್ಲಿ ಉಡುಪಿಯತ್ತ ನೀರು ಹರಿದು ಬಂದಿದೆ. ಗದ್ದೆ, ನಗರ ಪ್ರದೇಶ, ಲೇಔಟ್ ಒಳಗಡೆ ಕೆಸರು ನೀರು ನುಗ್ಗಿದೆ.

ಗುಂಡಿಬೈಲು, ಪಾಡಿಗಾರು, ಮಠದಬೆಟ್ಟು, ಕರಂಬಳ್ಳಿ, ಕಲ್ಸಂಕ ಬೈಲಕೆರೆ, ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ, ಮೂಡನಿಡಂಬೂರು, ನಿಟ್ಟೂರು, ಮಲ್ಪೆ, ಮಣಿಪಾಲ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಅಷ್ಟೆ ಅಲ್ಲದೇ 150ಕ್ಕೂ ಅಧಿಕ ಮನೆಗಳು ಜಲ ದಿಗ್ಭಂಧನಕ್ಕೆ ಒಳಗಾಗಿದ್ದು, ಕೆಲ ಕಡೆ ಅಂಗಡಿಗಳ ಒಳಗಡೆ ನೀರು ನುಗ್ಗಿದೆ.

ಜಲಾವೃತವಾದ ಚಕ್ರ ತೀರ್ಥ ಸಗ್ರಿ ವ್ಯಾಪ್ತಿಯಿಂದ ಎಂಟು ಜನರ ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರೆದಿದೆ. ಜಲಾವೃತವಾದ ಮನೆಗಳಿಂದ ಮಹಿಳೆಯರು ಮಕ್ಕಳು ವೃದ್ಧರನ್ನ ಕರೆತರಲಾಯಿತು. ಅಗ್ನಿಶಾಮಕ ದಳದ ಬೋಟ್ ನಲ್ಲಿ ಜನರನ್ನು ರಕ್ಷಣೆ ಮಾಡಲಾಗಿದೆ. ಮಹಿಳೆಯರು ಮಕ್ಕಳನ್ನು ಎತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ನಗರಸಭೆ, ಅಗ್ನಿಶಾಮಕದಳ, ಪೊಲೀಸರು ಮತ್ತು ಸ್ಥಳೀಯರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಸೋಮವಾರ(ಜು.8)ಬೆಳಗ್ಗೆ ಸುರಿದ ಮಳೆಗೆ ಕರಾವಳಿ ಅಂಡರ್ ಪಾಸ್ ನೀರಿನಿಂದ ಸುತ್ತುವರಿದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆಚ್ಚು ಪ್ರಮಾಣದ ಮಳೆ ನೀರು ತುಂಬಿಕೊಂಡು ವಾಹನ ಓಡಾಟಕ್ಕೆ ತೊಂದರೆಯಾಗಿದೆ. ದ್ವಿಚಕ್ರ ವಾಹನ, ಕಾರು ಹಾಗೂ ಬಸ್ಸುಗಳು ಕೃತಕ ನೆರೆ ನೀರಿನಲ್ಲಿ ಓಡಾಟ ನಡೆಸುತ್ತಿವೆ.

Tags:
error: Content is protected !!