ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಉಂಟು ಮಾಡಬಾರದೆಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಸಿಎಂ ಹಾಗೂ ಡಿಸಿಎಂ ಬದಲಾವಣೆ ಹೇಳಿಕೆ ಸಂಬಂಧ ರಾಜ್ಯ ಕಾಂಗ್ರೆಸ್ ನಾಯಕರಿಗೆ ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು, ಆ ವಿಚಾರವಾಗಿ ಯಾರೂ ಕೂಡ ಮಾತನಾಡಬಾರದು. ನಾಯಕತ್ವ ಬದಲಾವಣೆ ಏನೇ ಇದ್ದರೂ ಹೈಕಮಾಂಡ್ ಮಾಡಲಿದೆ ಎಂದರು.
ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಇರಬೇಕಾಗುತ್ತದೆ. ಈ ವಿಚಾರವಾಗಿ ಯಾವುದೇ ಗೊಂದಲ ಇರಬಾರದೆಂದು ನನಗೂ ಅನಿಸಿದೆ. ಯಾವೆಲ್ಲಾ ಬದಲಾವಣೆ ಇದೆಯೋ ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದು ಎಲ್ಲರಿಗೂ ಅನ್ವಯಿಸುತ್ತದೆ ಎಂದರು.