Mysore
24
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ : ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಕೆಲವು ಜನರು ಪ್ರವಾಹದಲ್ಲಿ ಸಿಲುಕಿದ್ರೆ ಇನ್ನ ಕೆಲವರು ಮನೆಗಳನ್ನ ಕಳೆದುಕೊಂಡು ಕಣ್ಣೀರಾಕುತ್ತಿದ್ದಾರೆ.

ನಿರಂತರ ಮಳೆಯಿಂದ ಜಿಲ್ಲೆಯಾದ್ಯಂತ ರೆಡ್‌ ಅಲರ್ಜ್‌ ಘೋಷಣೆ ಮಾಡಿದ್ದು, ಎಲ್ಲಾ ಅಂಗನವಾಡಿ, ಪ್ರಾಥಮಿಕ ಫ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ.

ಮೀನುಗಾರರು ಕೂಡ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ನದಿ, ಸಮುದ್ರ ತೀರದ ಜನ ಎಚ್ಚರಿವಹಿಸುವಂತೆ ಡಿಸಿ ಸೂಚಿಸಿದ್ದಾರೆ.

Tags:
error: Content is protected !!