ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು ಮಂಗಳವಾರವು ಮುಂಬೈನ ಹಲವು ಪ್ರದೇಶಗಳಲ್ಲಿ ಮಂಗಳವಾರವೂ (ಜುಲೈ. 9) ಮುಂದುವರೆದಿದ್ದು, ಈ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮುಂಬೈನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂದಿನ 24 ಗಂಟೆಗಳ ಕಾಲ ವಿಪರೀತವಾಗಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಸೇರಿದಂತೆ ಕೆಲವು ಸರ್ಕಾರಿ ಕಚೇರಿಗಳಿಗೂ ರಜೆ ನೀಡಲಾಗಿದೆ. ಮತ್ತು ರೈಲ್ವೆ ಇಲಾಖೆಯೂ ಮಂಗಳವಾರ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದೆ.