Mysore
27
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಮುಡಾ ಹಗರಣ: ಜುಲೈ 12ರಂದು ಮೈಸೂರಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಶಾಸಕ ಡಾ. ಅಶ್ವಥ್‌ ನಾರಾಯಣ್‌ ಹೇಳಿದರು.

ನಗರದಲ್ಲಿಂದು (ಜುಲೈ.9) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಅನುಕೂಲದ ಆಧಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿವೇಶನ ಪಡೆದಿದ್ದಾರೆ. ಮುಡಾದಲ್ಲಿ ಭಾರೀ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕನಾಗಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗಲೂ ಸಾಕಷ್ಟು ಹಗರಣಗಳನ್ನು ಮಾಡಿದ್ದಾರೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಅವರ ಬಂಡತನ, ಹಗಲು ದರೋಡೆ ಜನರಿಗೆಲ್ಲಾ ಗೊತ್ತಾಗಿದೆ. ಅವರು ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಒಪ್ಪಿಸಲು ತಯಾರಿಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಮುಡಾ ಅಕ್ರಮದಲ್ಲಿ ಪಾರದರ್ಶಕ ತನಿಖೆಗೆ ಆಗ್ರಹಿಸಿ ಮೈಸೂರಿನಲ್ಲಿ ವಿಪಕ್ಷ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ಜುಲೈ. 12ರಂದು ಮೈಸೂರಲ್ಲಿ ಹೋರಾಟ ನಡೆಸಲಾಗುವುದು ಎಂದು ಅಶ್ವಥ್‌ ನಾರಾಯಣ್‌ ಹೇಳಿದರು.

Tags: