Mysore
21
mist

Social Media

ಶುಕ್ರವಾರ, 02 ಜನವರಿ 2026
Light
Dark

ಕೃಷಿ ಇಲಾಖೆಯ ಬೆಳೆ ಸಮೀಕ್ಷೆಯುಳ್ಳ ಪೋಸ್ಟರ್ ಬಿಡುಗಡೆಗೊಳಿಸಿದ ಸಿಎಂ

ಮೈಸೂರು: ಮೈಸೂರಿನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಜು.11) ಕೃಷಿ ಇಲಾಖೆಯ ಬೆಳೆ ಸಮೀಕ್ಷೆ ಮಾಹಿತಿ ವುಳ್ಳ ಪೋಸ್ಟರ್ ನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆ ಕಾರ್ಯಕೆ ರೈತರು ಆಂಡ್ರಾಯ್ಡ್ ಫೋನ್ ಪ್ಲೇ ಸ್ಟೋರ್ ಮೂಲಕ ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಿಕೊಂಡು ರೈತರು ಸ್ವತಂ ತಮ್ಮ ಜಮೀನಿನಲ್ಲಿ ಬೆಳೆದಿರುವ ವಿವಿಧ ಬೆಳೆಗಳನ್ನು ನಮೂದಿಸಲು ಅವಕಾಶವಿರುತ್ತದೆ. ರೈತರು ಈ ಆಪ್ ನ್ನು ಡೌನ್ಲೋಡ್ ಮಾಡಿಕೊಂಡು ಸದುಪಯೋಗಪಡಿಸಿಕೊಳ್ಳಬೇಕಾಗಿ ಅವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್ ಸಿ ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ವಿಧಾನಸಭಾ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!