ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮೈಸೂರಲ್ಲಿ ಪ್ರತಿಭಟನೆ ಮಾಡುತ್ತಿದೆ.
ಇತ್ತ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಕೂಡಾ ಮೈಸೂರಿನಲ್ಲಿ ಪ್ರತಿಭಟನೆ ಮಾಡುತ್ತಿದೆ. ಬಿಜೆಪಿಯ ಡೋಂಗಿ ಮಾರಾಟಕ್ಕೆ ಕಾಂಗ್ರೆಸ್ ಎದುರುವುದಿಲ್ಲ ಎನ್ನುವ ಪೋಸ್ಟರ್ ಹಿಡಿದು ಘೋಷಣೆ ಕೂಗುತ್ತಿರುವುದು ಕಂಡುಬಂದಿತು.
ಮೈಸೂರಿನ ಮಹಾರಾಜ ಮೈದಾನದಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದರೇ, ಇವರಿಗೆ ಪ್ರತಿಯಾಗಿ ಮುಡಾ ಬದಿಯಲ್ಲಿರುವ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮೈದಾನದಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದ್ದಾರೆ.
ಕಾಂಗ್ರೆಸ್‌ನ ಶಾಸಕ ಹರೀಶ್ ಗೌಡ, ಎಂ ಲಕ್ಷ್ಮಣ್, ಪುಷ್ಪ ಅಮರನಾಥ್, ಆಯೂಬ್ ಖಾನ್, ಡಾ. ವಿಜಯ್‌ಕುಮಾರ್, ಎಸ್‌ಕೆ ಸೋಮಶೇಖರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಪ್ರತಿಭಟನೆ ಮಾಡುತ್ತಿದ್ದಾರೆ.
ಈ ವೇಳೆ ಮಾತನಾಡಿದ ಎಂ. ಲಕ್ಷ್ಮಣ್, ಮದ್ಯಾಹ್ನ 1 ಗಂಟೆ ವೇಳೆ ಮುಡಾ ಗೆ ಮುತ್ತಿಗೆ ಹಾಕಲಾಗುವುದು. ಬಳಿಕ ಅಲ್ಲಿಂದ ಬ್ಯಾರಿಕೇಡ್‌ಗಳನ್ನು ಒಡೆದು ಬಿಜೆಪಿ ಪ್ರತಿಭಟನೆ ಮಾಡುತ್ತಿರುವ ಜಾಗಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.





