Mysore
23
overcast clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆ ಖಂಡಿಸಿ ಪ್ರತಿಭಟನೆ

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ದಲಿತರಿಗೆ ಮಿಸಲಿಟ್ಟ ಅನುದಾನದಲ್ಲಿ 14,262 ಕೋಟಿ ಹಣವನು ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು(ಜು.12) ಪ್ರತಿಭಟನೆ ನಡೆಸಿತು.

ಡಿಎಸ್‌ಎಸ್‌ ಮುಖಂಡ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಾಸಕರು, ಮಂತ್ರಿಗಳನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಜೊತೆಗೆ ಮತ್ತೆ ಅವರ್ಯಾರು ಚುನಾವಣೆಗೆ ಸ್ಪರ್ಧಿಸದಂತೆ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಿವು, ಬಸವರಾಜು, ಜಿ.ಎಂ ಸತ್ಯ, ಮೂರ್ತಿ ಹಾಗೂ ಅಂಕಯ್ಯ ಸೇರಿದಂತೆ ಇನ್ನಿತರರು ಇದ್ದರು.

 

Tags:
error: Content is protected !!