Mysore
22
clear sky

Social Media

ಶನಿವಾರ, 14 ಮಾರ್ಚ್ 2026
Light
Dark

ಕೊಡಗಿನಲ್ಲಿ ಮತ್ತೆ ಚುರುಕುಗೊಂಡ ಮಳೆ: ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ಸೂಚನೆ

ಕೊಡಗು:  ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇಂದು ಸಂಜೆಯ ವೇಳೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಮೂಲಕ ಇಂದಿನಿಂದ ಮಳೆ ಸಕ್ರಿಯಗೊಂಡಿದ್ದು, ಮಡಿಕೇರಿ ಸೇರಿದಂತೆ ಹಲವೆಡೆ ಇಂದು ಭಾರೀ ಮಳೆಯಾಗಿದೆ.

ಇನ್ನೂ ವಾರಾಂತ್ಯದಲ್ಲಿ ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇದರ ಜೊತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಲವೆಡೆ ಗಾಳಿ ಜೊತೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ ಸೇರಿದಂತೆ ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ನಿರಂತರ ಗಾಳಿ ಜೊತೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Tags:
error: Content is protected !!