Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ತುಂಬಿದ ಕಬಿನಿ ಜಲಾಶಯ: ಡ್ಯಾಂನಿಂದ 20 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಭರ್ತಿಯಾಗಿದೆ.

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 83.30 ಅಡಿಗಳಾಗಿದೆ. ಜಲಾಶಯ ಭರ್ತಿಗೆ ಕೇವಲ ಒಂದು ಅಡಿ ಮಾತ್ರ ಬಾಕಿಯಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಇನ್ನೂ ಜಲಾಶಯದ ಸದ್ಯದ ಒಳಹರಿವು 19,181 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವನ್ನು 20,000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ. ಜಲಾಶಯದ ಒಳಹರಿವು ಹೆಚ್ಚಾದಂತೆ ಹೊರಹರಿವನ್ನೂ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಮಾಡಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನೂ ಮಳೆ ಹೀಗೆಯೇ ಮುಂದುವರಿದರೆ ಜಲಾಶಯದ ಒಳಹರಿವು ಮತ್ತಷ್ಟು ಏರಿಕೆಯಾಗುತ್ತದೆ. ಒಳಹರಿವು ಹೆಚ್ಚಾದಂತೆ ಹೊರಹರಿವನ್ನೂ ಕೂಡ ಹೆಚ್ಚಳ ಮಾಡಲಾಗುತ್ತದೆ. ಆದ್ದರಿಂದ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು. ಯುವಕರು ಈಜಾಡುವುದಕ್ಕೂ ಕೂಡ ನದಿಗೆ ಇಳಿಯಬಾರದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!