Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಾಜ್ಯದಲ್ಲಿ ಮುಂದುವರೆದ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಮೈಸೂರು: ರಾಜ್ಯದ ಹಲವೆಡೆ ಭಾನುವಾರವೂ(ಜು.14) ಭಾರಿ ಗಾಳಿ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರವಾಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡು ಪ್ರದೇಶವಾದ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಕೊಡಗು ಹಾಗೂ ಹಾಸನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಕಲಬುರಗಿ,ಬೀದರ್‌, ಧಾರವಾಡ, ರಾಯಚೂರು, ವಿಜಯಪುರ, ಬೆಳಗಾವಿ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಜತೆಗೆ ವೇಗವಾಗಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಉದ್ದೂಕ್ಕೂ ಬಿರುಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆಯಾಗ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರವಹಿಸಬೇಕು. ಇನ್ನೂ ಸೋಮವಾರವೂ ಕೆಲವರೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

 

Tags: