Mysore
20
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಡೊನಾಲ್ಡ್‌ ಟ್ರಂಪ್‌ ಮೇಲೆ ಮಾರಣಾಂತಿಕ ದಾಳಿಗೆ ಪ್ರಧಾನಿ ಮೋದಿ ಖಂಡನೆ

ನವದೆಹಲಿ: ಸ್ನೇಹಿತ ಡೊನಾಲ್ಡ್‌ ಟ್ರಂಪ್‌ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು, ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ರ್ಯಾಲಿ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ತನ್ನ ಸ್ನೇಹಿತನ ಮೇಲೆ ನಡೆದಿರುವ ಹಲ್ಲೆಯಿಂದ ಬೇಸರಗೊಂಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ, ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ ಎಂದು ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಅಮೆರಿಕಾದ ಮಾಧ್ಯಮ ವರದಿಗಳ ಪ್ರಕಾರ, ಡೊನಾಲ್ಡ್‌ ಟ್ರಂಪ್‌ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆಗ ಏಕಾಏಕಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಒಂದರ ಹಿಂದೆ ಒಂದರಂತೆ ಹಲವು ಸುತ್ತು ಗುಂಡು ಹಾರಿಸಿದ್ದಾರೆ.

ಗುಂಡಿನ ದಾಳಿ ನಡೆಸಿದ ಪರಿಣಾಮ ಟ್ರಂಪ್‌ ಬಲ ಕಿವಿಗೆ ಗಾಯವಾಗಿದೆ. ರಹಸ್ಯ ಸೇವಾ ತಂಡ ಕೂಡಲೇ ಅವರನ್ನು ಸ್ಥಳದಿಂದ ಹೊರಗೆ ಕರೆದೊಯ್ದಿದ್ದಾರೆ. ಟ್ರಂಪ್‌ ಮೇಲೆ ಬುಲೆಟ್‌ ಹಾರಿದ ತಕ್ಷಣ, ಪೊಲೀಸರು ಕಾರ್ಯಪ್ರವೃತ್ತರಾಗಿ ಪ್ರತಿದಾಳಿ ಆರಂಭಿಸಿದ್ದಾರೆ. ದಾಳಿಯಲ್ಲಿ ಶಂಕಿತ ಶೂಟರ್‌ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.

 

 

Tags: