ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ನಡ್ಡಾಗೆ ಆರೋಗ್ಯ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಮಹತ್ವದ ಖಾತೆಯನ್ನು ನೀಡಲಾಗಿದ್ದು, ಬಿಜೆಪಿಗೆ ಈಗ ಅಧ್ಯಕ್ಷರ ಹುಡುಕಾಟ ನಡೆದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿ ಜೂನ್‌ಗೆ ಮುಕ್ತಾಯವಾಗಿದೆ. ಇನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ನಡ್ಡಾಗೆ ಆರೋಗ್ಯ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಮಹತ್ವದ ಖಾತೆಯನ್ನು ನೀಡಲಾಗಿದೆ. ಹೀಗಾಗಿ ಬಿಜೆಪಿಗೆ ಈಗ ಅಧ್ಯಕ್ಷರ ಹುಡುಕಾಟ ನಡೆದಿದೆ.
ಈ ವರ್ಷದ ಡಿಸೆಂಬರ್ ವೇಳೆಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡುವ ಗುರಿಯನ್ನು ಬಿಜೆಪಿ ಹೊಂದಿದೆ. ಹೀಗಾಗಿ ಅಲ್ಲಿಯವರೆಗೂ ಜೆ.ಪಿ.ನಡ್ಡಾ ಅವರೇ ರಾಷ್ಟ್ರಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಬಿಜೆಪಿ ಪ್ರಕಾರ, ಪ್ರತಿಯೊಬ್ಬ ಸದಸ್ಯರು 9 ವರ್ಷಗಳಿಗೊಮ್ಮೆ ತಮ್ಮ ಸದಸ್ಯತ್ವವನ್ನು ನವೀಕರಿಸಬೇಕಾಗುತ್ತದೆ. ಈ ವರ್ಷ ಸದಸ್ಯತ್ವ ಅಭಿಯಾನವು ಪ್ರಧಾನಿ, ಅಧ್ಯಕ್ಷರು ಮತ್ತು ಎಲ್ಲಾ ಪಕ್ಷದ ನಾಯಕರು ತಮ್ಮ ಸದಸ್ಯತ್ವವನ್ನು ನವೀಕರಿಸುವ ಅಗತ್ಯವಿದೆ. ನವೆಂಬರ್.1ರಿಂದ ನವೆಂಬರ್.15 ರವರೆಗೆ ಬಿಜೆಪಿ ಮಂಡಲ ಅಧ್ಯಕ್ಷರ ಚುನಾವಣೆಯನ್ನು ನಡೆಸಲಿದೆ. ಇದಾದ ನಂತರ ನವೆಂಬರ್.16ರಿಂದ ನವೆಂಬರ್.30 ರವರೆಗೆ ಜಿಲ್ಲಾಧ್ಯಕ್ಷರ ಚುನಾವಣೆ ನಡೆಯಲಿದೆ.
ಈ ಚುನಾವಣೆಯ ನಂತರವೇ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಡಿಸೆಂಬರ್.1ರಂದು ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದ್ದು, ಶೇ.50ರಷ್ಟು ರಾಜ್ಯಗಳಲ್ಲಿ ಚುನಾವಣೆ ಪೂರ್ಣಗೊಂಡ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅಧಿಕೃತ ಪ್ರಕ್ರಿಯೆ ಆರಂಭವಾಗಲಿದೆ.