Mysore
17
few clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ವಿಟಿಯು ಘಟಿಕೋತ್ಸವ: ಇಸ್ರೋ ಅಧ್ಯಕ್ಷ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್‌

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 24ನೇ ವಾರ್ಷಿಕ ಘಟಿಕೋತ್ಸವ ಜುಲೈ. 18 ರಂದು ನಡೆಯಲಿದೆ ಎಂದು ಕುಲಪತಿ ಪ್ರೊ. ಎಸ್‌ ವಿದ್ಯಾಶಂಕರ್‌ ಸೋಮವಾರ (ಜು.15) ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗವರ್ನರ್‌ ಥಾವರ್‌ಚಂದ್‌ ಗೆಹ್ಲೋಟ್‌ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜತೆಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್‌ ಕೂಡಾ ಭಾಗವಹಿಸಲಿದ್ದಾರೆ. ಈ ವೇಳೆ ವಿವಿಯಿಂದ ಒಟ್ಟು 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದರ ಜೊತೆಯಲ್ಲಿ ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥನ್‌, ಚಿಕ್ಕಬಳ್ಳಾಪುರದ ಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸಂಸ್ಥಾಪಕ ಮಧುಸೂದನ್‌ ಸಾಯಿ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಹರಿ ಕೆ ಮರಾರ್‌ ಅವರಿಗೆ ಡಾಕ್ಟರ್‌ ಆಫ್‌ ಸೈನ್ಸ್‌ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದೂ ತಿಳಿಸಿದರು.

Tags:
error: Content is protected !!