Mysore
27
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ : ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ನವದೆಹಲಿ ; ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಎನ್‌ ಕೌಂಟರ್‌ ನಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ.

ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದೋಡಾ ಪಟ್ಟಣದಿಂದ ಸುಮಾರು ೫೫ ಕಿ.ಮೀ ದೂರದಲ್ಲಿರುವ ದೇಸಾದ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ರಾತ್ರಿ ೯ ಗಂಟೆಯಿಂದ ಉಗ್ರರ ಜೊತೆ ಗುಂಡಿನ ಕಾಳಗ ಆರಂಭವಾಗಿತ್ತು, ಆದರೆ ಉಗ್ರರು ಬೆಟ್ಟದ ತುದಿಯಲ್ಲಿ ಅವಿತುಕೊಂಡು ದಾಳಿ ಮಾಡುತ್ತಿದ್ದ ಕಾರಣ ಕಾರ್ಯಾಚರಣೆ ಕಷ್ಟವಾಗಿದೆ. ಬಳಿಕ ಗುಂಡಿನ ಕಾಳದ ವೇಳೆ ಉಗ್ರರು ತಪ್ಪಿಸಿಕೊಳ್ಳಲು ಯತ್ನಿಸಿದರು ಎನ್ನಲಾಗಿದೆ.

Tags:
error: Content is protected !!