Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಲಾರಿ ಹಾಗೂ ಬೈಕ್ ನಡುವೆ ಅಪಘಾತ: ಯುವಕರಿಬ್ಬರ ಸಾವು

ಕೊಡಗು: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಗರಹಳ್ಳಿ ಗ್ರಾಮದ ಬಳಿ ನಡೆದಿದೆ.

ಮಂಜು ಹಾಗೂ ರಕ್ಷಿತ್‌ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಸುಂಟಿಕೊಪ್ಪ ಹಾಗೂ ಗರಗಂದೂರು ಗ್ರಾಮದವರು ಎಂದು ತಿಳಿದು ಬಂದಿದೆ.

ಕುಶಾಲನಗರದ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇನ್ನೂ ಮೃತ ಶವಗಳನ್ನು ಕುಶಾಲನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:
error: Content is protected !!