Mysore
28
clear sky

Social Media

ಮಂಗಳವಾರ, 17 ಫೆಬ್ರವರಿ 2026
Light
Dark

ಭರ್ತಿಯತ್ತ ಕೆಆರ್‌ಎಸ್‌ ಜಲಾಶಯ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಬೆಂಗಳೂರು: ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗುತ್ತಿರುವುದು ರೈತರಿಗೆ ಸಂತಸ ತಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆಯೂ ಕೂಡ ಸರಿಹೋಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾದರಷ್ಟೇ ತಮಿಳುನಾಡಿಗೆ ನೀರು ಬಿಡಲಾಗುತ್ತದೆ. ಇಲ್ಲಿಗೆ ಮಳೆ ನಿಂತು ಜಲಾಶಯದ ನೀರಿನ ಮಟ್ಟ ಹಾಗೆಯೇ ಉಳಿದರೆ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದಿಲ್ಲ. ಮೊದಲು ನಮ್ಮ ರಾಜ್ಯದ ರೈತರ ಕಷ್ಟಗಳನ್ನು ಆಲಿಸೋಣ, ತದನಂತರ ಬೇರೆ ವಿಷಯಗಳ ಬಗ್ಗೆ ತಲೆಹಾಕೋಣ ಎಂದರು.

 

Tags:
error: Content is protected !!