ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮತ್ತೆ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತಗೊಂಡಿದೆ.
ಹಾಸನದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ.
ಹಾಸನದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಡ್ಡ ಪ್ರದೇಶಗಳಲ್ಲಿ ವಾಸಿಸುವ ಜನರು ಭಾರೀ ಭಯಭೀತರಾಗಿದ್ದು, ಜೀವಭಯದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಣವಾಗಿದೆ.
ಇನ್ನೂ ಹಾಸನದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತೆ ಭೂಕುಸಿತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿದಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಇನ್ನೂ ನಿನ್ನೆಯೂ ಕೂಡ ಸಕಲೇಶಪುರ ತಾಲ್ಲೂಕಿನ ಗುಲಗಳಲೆ ಬಳಿ ರಾಷ್ಟ್ರೀಯ ಹೆದ್ದಾರಿ ಕುಸಿದಿತ್ತು. ಹೀಗಿರುವಾಗಲೇ ಇಂದು ಮತ್ತೆ ಹೆದ್ದಾರಿ ಕುಸಿದಿದ್ದು, ಸ್ಥಳೀಯರು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.