ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲದಲ್ಲಿ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಉತ್ತಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ.
ರೈತ ಉತ್ತಪ್ಪ ಕಾಫಿ ತೋಟದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ಅಠಾತ್ ದಾಳಿ ನಡೆಸಿದೆ. ಪರಿಣಾಮ ಉತ್ತಪ್ಪರಿಗೆ ಗಂಭೀರ ಗಾಯಗಳಾಗಿದ್ದು, ವಿರಾಜಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನೂ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ವಿಪರೀತ ಹೆಚ್ಚಾಗಿದ್ದು, ಇವುಗಳನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇನ್ನು ಮುಂದೆ ಈ ರೀತಿಯ ಘಟನೆಗಳು ಆಗದಂತೆ ಅರಣ್ಯ ಇಲಾಖೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ವಿರುದ್ಧ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.