Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

ಕಬಿನಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ.

ಜಲಾಶಯದ ಇಂದಿನ ಒಳಹರಿವು 38,660 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 50,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಜಲಾಶಯದಿಂದ ಹೊರಹರಿವು ಹೆಚ್ಚಾದಂತೆ ಕಪಿಲಾ ನದಿ ಮೈದುಂಬಿ ಹರಿಯುತ್ತಿದೆ. ಇನ್ನೂ ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 82 ಅಡಿಗಳಾಗಿದೆ.

ಜಲಾಶಯ ಭರ್ತಿಯಾಗಿರುವುದರಿಂದ ಒಂದೆಡೆ ರೈತರಿಗೆ ತೀವ್ರ ಸಂತಸವಾಗಿದೆ. ಆದರೆ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನತೆಗೆ ಮುಖದಲ್ಲಿ ಭಯವನ್ನುಂಟುಮಾಡಿದೆ. ಕಪಿಲಾ ನದಿ ಪಾತ್ರದ ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು, ಯಾರೂ ಕೂಡ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

 

 

Tags:
error: Content is protected !!