Mysore
16
clear sky

Social Media

ಗುರುವಾರ, 25 ಡಿಸೆಂಬರ್ 2025
Light
Dark

ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಜು. 19ರಿಂದ ನಾಲೆಗಳಿಗೆ ನೀರು

ಹಂಪಿ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಯಲ್ಲಿ ರಾಜ್ಯದ ಪ್ರಮುಖ ಡ್ಯಾಂಗಳು ಭಾಗಶಃ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಇದೇ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್‌ ತಂಗಡಗಿ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿದ್ದು ಜಲಾಶಯಕ್ಕೆ ಹೆಚ್ಚಿನ ಒಳಹರಿವು ಆಗುತ್ತಿದ್ದು, ಜನರಿಗೆ ಕೃಷಿಗಾಗಿ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ಸೂಚಿಸಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಜು.18ಕ್ಕೆ ಜಲಾಶಯದಲ್ಲಿ 46,802 ಟಿಎಂಸಿ ನೀರು ಸಂಗ್ರಹವಾಗಿದೆ. ಹಾಗೂ ತುಂಗೆಗೆ 1,04,060 ಕ್ಯೂ. ಒಳಹರಿವು ನೀರು ಸೇರುತ್ತಿದ್ದು, ಹೀಗೆ ಮುಂದುವರಿದರೆ ವಾರದೊಳಗೆ ತುಂಗೆ ಭರ್ತಿಯಾಗಲಿದೆ. ಹೀಗಾಗಿ ಸಭೆ ನಡೆಸದೇ ಜನರ ಹಿತದೃಷ್ಠಿಯಿಂದ ಮುಂಗಡವಾಗಿ ನಾಲೆಗೆ ನೀರು ಹರಿಸಲು ಸೂಚನೆ ನೀಡಿರುವುದಾಗಿ ಸಚಿವ ತಂಗಡಗಿ ಹೇಳಿದರು.

Tags:
error: Content is protected !!