Mysore
23
broken clouds
Light
Dark

113 ಅಡಿ ತಲುಪಿದ ಕೆಆರ್‌ಎಸ್‌ ಜಲಾಶಯ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಕೂಡ ಭರ್ತಿಯತ್ತ ಸಾಗುತ್ತಿದ್ದು, ರೈತರು ಈ ಬಾರಿಯಾದರೂ ಉತ್ತಮ ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.

ಪ್ರಸ್ತು ಕೆಆರ್‌ಎಸ್‌ ಜಲಾಶಯದ ಒಳಹರಿವು 36,000 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 2500 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಜಲಾಶಯದಲ್ಲಿ ಈಗ 113 ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಇನ್ನು ಒಂದು ವಾರದಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಅಂದಾಜಿಸಲಾಗಿದೆ.