ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜಿಗಳಿಗೆ ಇಂದು(ಜು.19)ಸಹ ರಜೆ ಮುಂದುವರೆಸಲಾಗಿದೆ.
ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ,ಕಾಲೇಜುಗಳಿಗೆ ( ಪದವಿ ಪೂರ್ವ ) ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಪೊನ್ನಂಪೇಟೆ, ಗೋಣಿಕೊಪ್ಪ ಹಾಗೂ ಕಾವೇರಿ ಹಿಲ್ಸ್‌ನಲ್ಲಿ ಮಳೆಯಿಂದ ಕೀರುಹೊಳೆಯ ನೀರಿನ ಹರಿವು ಹೆಚ್ಚಾಗಿದ್ದು, ಇಲ್ಲಿನ ಮನೆಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಈ ಸಂಬಂಧ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂಜಾಗ್ರತ ಕ್ರಮವಾಗಿ ಕೆಲವು ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದಾರೆ.