Mysore
24
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಹಾಸನದಲ್ಲಿ ಮುಂದುವರಿದ ಮಳೆಯ ಆರ್ಭಟ

ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಜಿಟಿ ಜಿಟಿ ಮಳೆ ಈಗ ಉಗ್ರ ಸ್ವರೂಪ ತಾಳಿದೆ.

ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವೆಡೆ ಮನೆಗಳು ಕುಸಿತವಾಗಿವೆ. ಶುಕ್ರವಾರ ರಾತ್ರಿ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳ್ಳಿಯೊಂದರಲ್ಲಿ ಕೊಟ್ಟಿಗೆ ಮುರಿದುಬಿದ್ದು, ಮೂರು ಹಸುಗಳು ಸಾವನ್ನಪ್ಪಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿರುವ ಶಿರಾಡಿ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಮನೆಮಾಡಿದ್ದು, ಆತಂಕದಲ್ಲೇ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚಾರ ಮಾಡುತ್ತಿವೆ.

ಇನ್ನು ದೊಡ್ಡತಪ್ಲು ಬಳಿ ಪದೇ ಪದೇ ಗುಡ್ಡದ ಮಣ್ಣು ಕುಸಿಯುತ್ತಿದ್ದು, ತೆರವು ಕಾರ್ಯಕ್ಕೆ ಮಳೆರಾಯ ಅಡ್ಡಿಪಡಿಸುತ್ತಿದ್ದಾನೆ. ಆದರೂ ತೆರವು ಕಾರ್ಯ ನಡೆಯುತ್ತಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

 

 

Tags: