Mysore
23
mist

Social Media

ಶುಕ್ರವಾರ, 02 ಜನವರಿ 2026
Light
Dark

ಸಿಎಂ ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಚುನಾವಣೆಯಲ್ಲಿ ಹೆಂಡ ಖರೀದಿಗೆ ಬಳಸಲಾಗಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯವೇ ಹೇಳಿದೆ.

ಈ ಎಲ್ಲಾ ಹಗರಣಗಳನ್ನು ಒಪ್ಪಿಕೊಂಡು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

ರಾಜ್ಯದ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗದವರು ನಿಮ್ಮ ಮೇಲೆ ವಿಶ್ವಾಸವಿಟ್ಟು 136 ಸ್ಥಾನ ನೀಡಿದರು. ಅವರ ಹಣವನ್ನೇ ತಿಂದು ಅವರಿಗೇ ಅನ್ಯಾಯ ಮಾಡಿದ್ದೀರಿ. ನಿಮ್ಮ ಪಾಪದ ಕೊಡ ತುಂಬಿದೆ. ಮೈಸೂರಿನ ಮುಡಾ ಹಗರಣ ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದೀರಿ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭಾರೀ ಭ್ರಷ್ಟಾಚಾರ ಆಗಿದೆ. ಭ್ರಷ್ಟಾಚಾರದ ವಿರುದ್ಧ ಬಿಜೆಪಿಯವರು ಸುಮ್ಮನೆ ಕೂರಲ್ಲ ಅಂತಾ ಗೊತ್ತಾಗಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ತೀವ್ರ ಆತಂಕದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

 

Tags:
error: Content is protected !!