ಮೈಸೂರು: ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರಿಂಗ್ ರಸ್ತೆಯಲ್ಲಿ ಬಾವಿಯೊಂದು ಪತ್ತೆಯಾಗಿದೆ.
ದಟ್ಟಗಳ್ಳಿ ರಿಂಗ್ ರಸ್ತೆಯ ಮೈಸೂರು ವಿಶ್ವವಿದ್ಯಾನಿಲಯ ಬಡಾವಣೆಯ ಮಾರಮ್ಮನ ದೇವಾಲಯದ ಬಳಿಯಲ್ಲಿ ಈ ಬಾವಿ ಪತ್ತೆಯಾಗಿದೆ.
ಕಳೆದ ಕೆಲ ದಿನಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಕೂಡ ಅಸ್ತವ್ಯಸ್ತವಾಗಿದೆ.
ಈ ಬೆನ್ನಲ್ಲೇ ರಿಂಗ್ ರಸ್ತೆಯಲ್ಲಿ ಈ ಬೃಹತ್ ಬಾವಿಯೊಂದು ಪತ್ತೆಯಾಗಿರುವುದು ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ.
ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಈ ಬೃಹತ್ ಬಾವಿಯನ್ನು ಪರಿಶೀಲನೆ ನಡೆಸಿದ್ದು, ಪೊಲೀಸರ ನೆರವಿನಿಂದ ಬ್ಯಾರಿಕೇಡ್ ಅಳವಡಿಸಿದ್ದಾರೆ.
ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.