ಉತ್ತರಾಖಂಡ್: ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಮೂವರು ಯಾತ್ರಿಕರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಎಂಟಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೇದಾರನಾಥಕ್ಕೆ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಅಲ್ಲಿದ್ದ ಎಲ್ಲಾ ಯಾತ್ರಿಕರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ರವಾನಿಸಿ, ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದೆ.
ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.





