ನವದೆಹಲಿ: ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜುಲೈ.23ರಂದು ಬಜೆಟ್ ಮಂಡಿಸಲು ಸಜ್ಜಾಗಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದು, ಈ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನೀಡಿದ್ದ ಆಶ್ವಾಸನೆಗಳು ಹಾಗೂ ಪ್ರಣಾಳಿಕೆಗಳ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಇನ್ನು ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣ ವಲಯ ಕೂಡ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ದೊಡ್ಡ ದೊಡ್ಡ ಹೂಡಿಕೆಗಳು ಮತ್ತು ಶಿಕ್ಷಣ ವಲಯ ಸುಧಾರಣೆಗೆ ಕಾರಣವಾಗುವ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಸಾಮಾನ್ಯ ಜನರು ಹಾಗೂ ಮಹಿಳೆಯರು ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚು ಮಹತ್ವ ಕೊಡಲಿದ್ದು, ಬಜೆಟ್‌ನಲ್ಲಿ ಯಾವ ಯಾವ ಕ್ಷೇತ್ರಕ್ಕೆ ಬಂಪರ್ ಆಫರ್ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.