Mysore
21
overcast clouds
Light
Dark

ಕಬಿನಿ ಜಲಾಶಯದ ಹೊರಹರಿವಿನಲ್ಲಿ ಭಾರೀ ಇಳಿಕೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ.

ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಇಳಿಕೆ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 5000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 2000 ಕ್ಯೂಸೆಕ್ಸ್‌ಗಳಿಗೆ ಇಳಿಕೆಯಾಗಿದೆ.

ಕಳೆದ ಎರಡು ದಿನಗಳಿಂದ ಬಿಸಿಲು ಇರುವುದರಿಂದ ನದಿ ಪಾತ್ರದ ಜನತೆ ಕೊಂಚ ನಿರಾಳರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನೆರಡು ದಿನದಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರ ಸ್ಥಿತಿ ಸಹಜ ಸ್ಥಿತಿಯತ್ತ ಮರಳಲಿದೆ.

ಮಳೆ ಕಡಿಮೆಯಾಗಿ ಕಬಿನಿ ಜಲಾಶಯದ ಹೊರಹರಿವಿನಲ್ಲಿ ಭಾರೀ ಇಳಿಕೆಯಾದ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರ ಸ್ಥಿತಿ ಇನ್ನೆರಡು ದಿನದಲ್ಲಿ ಸಹಜ ಸ್ಥಿತಿಯತ್ತ ಮರಳಲಿದ್ದು, ರೈತರು ಕೂಡ ಭಾರೀ ಸಂತಸದಲ್ಲಿದ್ದಾರೆ.

ಆದರೆ ಮತ್ತೆ ಇನ್ನೆರಡು ದಿನಗಳಲ್ಲಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಳೆ ಜಾಸ್ತಿ ಆದರೆ ಮತ್ತೆ ಕಬಿನಿ ಜಲಾಶಯದ ಒಳಹರಿವು ಹೆಚ್ಚಾಗಲಿದೆ. ಒಳಹರಿವಿ ಹೆಚ್ಚಾದಂತೆ ಹೊರಹರಿವನ್ನು ಹೆಚ್ಚಳ ಮಾಡಲಾಗುತ್ತದೆ ಎನ್ನಲಾಗಿದೆ.