ಮೈಸೂರು : ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್.ಸಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪ ಚಿತ್ರಮಂದಿರಕ್ಕೆ ಜಯಲಕ್ಷ್ಮೀಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ರಾತ್ರಿ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆಯ ವೇಳೆ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಗಲಾಟೆಯಾಗಿದೆ. ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು ಹಾಗಾಗಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಜಯಲಕ್ಷ್ಮೀಪುರಂ ಇನ್ಸ್ ಪೆಕ್ಟ್ರ್ ಕುಮಾರ್ ನೇತೃತ್ವದಲ್ಲಿ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಇಂದು ಪೊಲೀಸರು ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡಿದರು. ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದ ಪೊಲೀಸರು, ಬಳಿಕ ಚಿತ್ರಮಂದಿರ ಮಾಲೀಕರಿಂದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಪ್ರಕರಣದ ಬಗ್ಗೆ ಚಿತ್ರಮಂದಿರದ ಮಾಲೀಕರು ಸಹ ಸ್ಪಷ್ಟನೆ ನೀಡಿದ್ದಾರೆ.
ಇನ್ನು ಈ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.