ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊಲದ ಬಜೆಟ್ ಗೆ ಕ್ಷಣಗಣನೆ ಶುರುವಾಗಿದೆ. ಮೋದಿ ೩.O ಸರ್ಕಾರದ ಮೊದಲ ಬಜೆಟ್ ಮೇಲೆ ಕರ್ನಾಟಕ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದೆ.
ಇಂದು ಸಂಸತ್ ನಲ್ಲಿ ಬೆಳಿಗ್ಗೆ ೧೧ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ೨೦೨೪ ಮತ್ತು ೨೫ನೇ ಸಾಲಿನ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.
ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುವ ಈ ಬಜೆಟ್ ಮೇಲೆ ಜನಸಾಮಾನ್ಯರಿಂದ ಹಿಡಿದು ಉದ್ಯಮಿಗಳ ತನಕ, ಅನ್ನದಾತರಿಂದ ವ್ಯಾಪಾರಿಗಳ ತನಕ, ಬೆಂಗಳೂರಿನ ಪ್ರಯಾಣಿಕರಿಂದ ಹಿಡಿದು ರಾಜ್ಯದ ಮೂಲೆ ಮೂಲೆಯಲ್ಲಿ ಸಂಚರಿಸುವ ರೈಲ್ವೆ ಪ್ರಯಾಣಿಕರ ತನಕ ಅಪಾರವಾದ ನಿರೀಕ್ಷೆ ಇದೆ.





