Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಶಿಸ್ತು ಕ್ರಮ ಎಚ್ಚರಿಕೆ

ಬೆಂಗಳೂರು : ರೀಲ್ಸ್‌ ಮಾಡುವ KSRTC, BMTC ಸಾರಿಗೆ ಇಲಾಖೆಯ ಚಾಲಕ ನಿರ್ವಾಹಕರಿಗೆ ಸಾರಿಗೆ ಸಚಿವರು ಖಡಕ್‌ ಎಚ್ಚರಿಕೆ ಕೊಟ್ಟಿದ್ದರು. ಈ ಬೆನ್ನಲ್ಲೆ ಇದೀಗ  ಸಮವಸ್ತ್ರ ಧರಿಸಿ ರೀಲ್ಸ್‌ ಮಾಡುವ ಪೊಲೀಸರಿಗೆ  ಕಮಿಷನರ್‌ ಬಿ ದಯಾನಂದ್‌ ಬಿಸಿ ಮುಟ್ಟಿಸಿದ್ದಾರೆ.  ಅಲ್ಲದೆ ಸಮವಸ್ತ್ರದಲ್ಲಿ ರೀಲ್ಸ್‌ ಮಾಡುವ ಪೊಲೀಸರಿಗೆ ಶಿಸ್ತು ಕ್ರಮ ಎಚ್ಚರಿಕೆ ಸಹ ನೀಡಿದ್ದಾರೆ.

ಸಮವಸ್ತ್ರದಲ್ಲಿ ಅಶಿಸ್ತು ತೋರಿಸುವ ಸಿಬ್ಬಂದಿ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪೊಲೀಸ್‌ ಕರ್ತವ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಫೋಟೋ, ರೀಲ್ಸ್‌ ಅಪ್ಲೋಡ್‌ ಮಾಡುವಂತಿಲ್ಲ. ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆಗೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪೊಲೀಸ್‌ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಟಲ್‌ ಪ್ಲಾಟ್‌ ಫಾರ್ಮ್‌ ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನ ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹಾಗಾಗಿ ಸಮವಸ್ತ್ರದಲ್ಲಿ ರೀಲ್ಸ್‌ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆಗೆ ನೀಡಿ ಕಮಿಷನರ್‌ ದಯಾನಂದ್‌ ಸೂಚನೆ ನೀಡಿದ್ದಾರೆ.

 

 

Tags: